ದೋಸೆಯಲ್ಲಿ ಅರಳಿದ ಮತದಾನ ಜಾಗೃತಿ

ದಾವಣಗೆರೆ:ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ನಗರದ ರಾಮ್ ಅಂಡ್ ಕೋ ವೃತ್ತದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಹಿಟ್ನಾಳ್ ಹೆಂಚಿಗೆ ದೋಸೆ ಹಾಕುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಮಂಜನಾಯ್ಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ್, ಡಯಟ್ ಪ್ರಿನ್ಸಿಪಾಲ್ ಗೀತಾ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.