ಜಿಪಂ ಉಪ ಕಾರ್ಯದರ್ಶಿ ನೇತೃತ್ವದಲ್ಲಿ ಖಾತ್ರಿ ಕೂಲಿಗಾರರಿಗೆ ಮತದಾನ ಜಾಗೃತಿ

ದಾವಣಗೆರೆ: ಹರಿಹರ ತಾಲ್ಲೂಕು ಬನ್ನಿಕೋಡು ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯ ಕಾಮಗಾರಿ ಸ್ಥಳದಲ್ಲಿ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಹಿಟ್ನಾಳ್ ಮಾರ್ಗದರ್ಶನದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಲ್.ಎ. ಕೃಷ್ಣನಾಯ್ಕ್ ನೇತೃತ್ವದಲ್ಲಿ ಕೂಲಿಕಾರರಿಗೆ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಿ ಮತದಾರ ಪ್ರತಿಜ್ಞಾ ವಿಧಿ ಭೋದಿಸಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು, ಪಿಡಿಒ, ಐಇಸಿ ಸಂಯೋಜಕರು, ತಾಂತ್ರಿಕ ಸಂಯೋಜಕರು ತಾಂತ್ರಿಕ ಸಹಾಯಕರು ಹಾಜರಿದ್ದರು.