ಮನೆಯಿಂದ ಮತದಾನ ಪ್ರಕ್ರಿಯೆ ಏಪ್ರಿಲ್ 29 ರ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ

ಮನೆಯಿಂದ ಮತದಾನ ಪ್ರಕ್ರಿಯೆ ಏಪ್ರಿಲ್ 29 ರ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ

ದಾವಣಗೆರೆ  : ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ 106.ದಾವಣಗೆರೆ ಉತ್ತರ ಹಾಗೂ 107. ದಕ್ಷಿಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂಚೆ ಮತದಾನ 12ಡಿ ಅರ್ಜಿ ಸಲ್ಲಿಸಿರುವ ಮತದಾರರ ಮನೆಯಿಂದಲೇ ಮತದಾನ ಪ್ರಕ್ರಿಯೆಯು ಏಪ್ರಿಲ್ 29 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯುತ್ತದೆ.

ದಾವಣಗೆರೆ ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ 80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರು ಹಾಗೂ ಕೋವಿಡ್-19 ರ ಬಾಧಿತ ಸೋಂಕಿತರಿಗೆ ಮನೆಯಿಂದಲೇ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು, ಈಗಾಗಲೇ ಅಂಚೆ ಮತದಾನಕ್ಕೆ ಅರ್ಜಿ ಸಲ್ಲಿಸಿರುವ ಮತದಾರರು ತಮ್ಮ ಮತಕ್ಷೇತ್ರದಲ್ಲಿ ಇದ್ದು, ಕಾರ್ಯಾಲಯದಿಂದ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಸಹಕಾರ ನೀಡಿ ಮತದಾನ ಮಾಡಲು ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!