24ಕ್ಕೆ ವಿಟಿಯು ಘಟಿಕೋತ್ಸವ: ಮೂವರಿಗೆ ಗೌ.ಡೌಕ್ಟರೇಟ್

ಗೌ.ಡೌಕ್ಟರೇಟ್

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವ ಫೆ. 24ರಂದು ಬೆಳಿಗ್ಗೆ 10.30ಕ್ಕೆ ಜ್ಞಾನಸಂಗಮ ಆವರಣದಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್‌ ಕಲಾಂ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ ತಿಳಿಸಿದ್ದಾರೆ.

ಸೋಮವಾರ ಈ ಕುರಿತು ಮಾಹಿತಿ ನೀಡಿದ ಅವರು, ‘ಔದ್ಯೋಗಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರಿಗೆ ಈ ಬಾರಿ ಗೌರವ ಡಾಕ್ಟರೇಟ್‌ ನೀಡಲಾಗುತ್ತಿದೆ. ಟೊಯೊಟಾ ಕಿರ್ಲೋಸ್ಕರ್‌ ಮೋಟಾರ್ಸ್‌ನ ಉಪಾಧ್ಯಕ್ಷ ವಿಕ್ರಮ್‌ ಕಿರ್ಲೋಸ್ಕರ್‌ (ಮರಣೋತ್ತರ), ವೆಬ್ಕೊ ಇಂಡಿಯಾ ಲಿಮಿಟೆಡ್‌ ಹಾಗೂ ಟಿವಿಎಸ್‌ ಆಟೊಮೆಟಿವ್‌ ಸಲ್ಯೂಷನ್ಸ್‌ನ ಪ್ರೈವೇಟ್‌ ಲಿಮಿಟೆಡ್‌ ಅಧ್ಯಕ್ಷ ಎಂ.ಲಕ್ಷ್ಮೀನಾರಾಯಣ್‌, ಬೆಲಗಮ್‌ ಫೆರೊಕಾಸ್ಟ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಸಚಿನ್‌ ಸಬ್ನಿಸ್‌ ಗೌರವ ಡಾಕ್ಟರೇಟ್‌ ಪಡೆಯಲಿದ್ದಾರೆ ಎಂದರು.

ಒಟ್ಟು 62,228 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಹಾಗೂ 701 ಮಂದಿಗೆ ಪಿಎಚ್‌.ಡಿ ಪ್ರದಾನ ಮಾಡಲಾಗುವುದು. ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವಥ್‌ ನಾರಾಯಾಣ ಅತಿಥಿಗಳಾಗಿ ಭಾಗವಹಿಸುವರು. ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತಿನ ಅಧ್ಯಕ್ಷ ಪ್ರೊ.ಟಿ.ಜಿ. ಸೀತಾರಾಮ್‌ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!