ವಿರೋದ ಪಕ್ಷದವರ ಅಪಪ್ರಚಾರಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ – ಬಿಎಸ್ ವೈ

ದಾವಣಗೆರೆ: ಹಾನಗಲ್ ಹಾಗೂ ಸಿಂದಗಿ ಎರಡು ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಭಾರಿ ಅಂತರ ದಿಂದ ಗೆಲುವುದು ನಿಶ್ಚಿತಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡು ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಮುಖಂಡರು ಕಾರ್ಯಕರ್ತರು ಬಹುಸಂಖ್ಯೆಯಲ್ಲಿ ಬಾರಿ ಪ್ರಚಾರ ಸಭೆ ನಡೆಸಿದ್ದು ಜನರ ಒಲವ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷದ ಮೇಲೆ ಇದ್ದು ಗೆಲ್ಲುವ ವಿಶ್ವಾಸವಿದೆ.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಮುಖಂಡರು ಅಪಪ್ರಚಾರ ಮಾಡುತ್ತಿದ್ದು ಕವಡೆ ಕಾಸಿನ ಕಿಮ್ಮತ್ತಿಲ್ಲ.ವಿರೋಧ ಪಕ್ಷದಲ್ಲಿದ್ದದದ ಮಾ ಡುವುದು ಸಹಜ ಅದರ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು.