ವೀಕೆಂಡ್‌ಗೆ ಮಳೆ ಅಡ್ಡಿ! ಯಾವ್ಯಾವ ಜಿಲ್ಲೆಗೆ ಅಲರ್ಟ್
![Weather-heavy-rains-alert-for-another-week-to-karnataka](https://garudavoice.com/wp-content/uploads/2023/12/images.jpg)
ಬೆಂಗಳೂರು: ವಾರಾಂತ್ಯದಲ್ಲಿ ಮಳೆ ಸೂಚನೆ ಇದ್ದು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸುರಿಯಲಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರದ ಅಲ್ಲಲ್ಲಿ ಚದುರಿದಂತೆ ಮಳೆಯಾಗಹುದು.
ಸಾಧಾರಣ ಮಳೆ!
ಉತ್ತರ ಒಳನಾಡಿನ ವಿಜಯನಗರ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಕೊಪ್ಪಳ, ಗದಗ, ಬಾಗಲಕೋಟೆ, ಗದಗ, ಹಾವೇರಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಮೇಲುಗೈ ಸಾಧಿಸಲಿದೆ.
ಉತ್ತರ ಕನ್ನಡ, ಉಡುಪಿಗಿಲ್ಲ ಮಳೆ ಸೂಚನೆ
ಮಲೆನಾಡಿನ ಚಿಕ್ಕಮಗಳೂರು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಕರಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಒಣಹವೆ ಮುಂದುವರಿಯಲಿದೆ.
ಬೆಂಗಳೂರಲ್ಲಿ ಆಗಾಗ ಮರೆಯಾಗುವ ಸೂರ್ಯ
ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಹಗುರ ಮಳೆಯಾಗಹುದು. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ -18 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 17 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 20 ಡಿ.ಸೆ
ಬೆಳಗಾವಿ: 30 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ