ಪ್ರಧಾನಿಯವರ ಯುವ ಜನೋತ್ಸವ ದಿಂದ ತೆರಳುವಾಗ ಅಪಘಾತ ಇಬ್ಬರ ಸ್ಥಿತಿ ಗಂಭೀರ

While leaving the Prime Minister's Yuva Janotsava, the accident occurred and the condition of the two is critical

ಕಲಘಟಗಿ: ಯುವ ಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ ಸಂದರ್ಭದಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದ ಜನರು ಮರಳಿ ಹೋಗುವಾಗ ಸರಣಿ ಅಪಘಾತ ರಾಮನಾಳದ ಬಳಿ ನಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿ, ಹಲವರು ಗಾಯಗೊಂಡ ಘಟನೆ ನಡೆದಿದೆ.

ಹುಬ್ಬಳ್ಳಿಯ ಕಾರ್ಯಕ್ರಮ ಮುಗಿಸಿ ಮರಳಿ ಹೋಗುತ್ತಿದ್ದಾಗ ದುರ್ಘಟನೆ ನಡೆದಿದ್ದು, ಬಸ್, ಟಾಟಾ ಏಸ್, ಆಟೋ, ಲಾರಿ ಹಾಗೂ ಮತ್ತೊಂದು ಲಾರಿಯ ನಡುವೆ ಅಪಘಾತ ಸಂಭವಿಸಿದ್ದು, ಬಹುತೇಕ ವಾಹನಗಳು ಜಖಂಗೊಂಡಿವೆ.

ಘಟನೆಯಲ್ಲಿ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮಾಹಿತಿಯನ್ನ ಕಲೆ ಹಾಕಲಾಗುತ್ತಿದೆ.

ಕಲಘಟಗಿ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!