ಲೋಕಲ್ ಸುದ್ದಿ

ಬ್ರಾಹ್ಮಣರೇಕೆ ಸಿಎಂ ಆಗಬಾರದು?: ಪೇಜಾವರ ಶ್ರೀ

ಮದ್ದೂರು: ಬ್ರಾಹ್ಮಣರು ಭಾರತದ ಪ್ರಜೆಗಳಲ್ಲವೇ? ಅವರೇಕೆ ಮುಖ್ಯಮಂತ್ರಿಯಾಗಬಾರದು ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಪ್ರಶ್ನಿಸಿದ್ದಾರೆ.
ಪಟ್ಟಣದ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ಸೋಮವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧದ ಹೇಳಿಕೆಗಳು ಬರುತ್ತಿವೆ. ಚುನಾವಣೆ ಸಂದರ್ಭದಲ್ಲಿ ಹೆಚ್ಚಾಗುತ್ತವೆ. ರಾಜ್ಯದಲ್ಲಿ ಬ್ರಾಹ್ಮಣ ಶಾಸಕರೆಷ್ಟಿದ್ದಾರೆ, ಎಷ್ಟು ಮಂದಿಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿದೆ? ಎಂದು ಶ್ರೀಗಳು ಪ್ರಶ್ನಿಸಿದರು.
ಬ್ರಾಹ್ಮಣರು ಕಡಿಮೆ ಇದ್ದಾರೆಂಬ ಕಾರಣಕ್ಕೆ ಏನು ಮಾತನಾಡಿದರೂ ನಡೆಯುತ್ತದೆ ಎಂದು ಮಾತನಾಡುತ್ತಾರೆ. ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು ಎಂದು ಹೇಳಿದರು.
ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಆತನ ಇಡೀ ಸಮಾಜವನ್ನು ದೂಷಿಸುವುದಾದರೆ, ಇತರೆ ಸಮಾಜದಲ್ಲಿ ನಡೆದ ವಿಚಾರವನ್ನ ಏಕೆ ಸಾಮೂಹಿಕರಣ ಮಾಡುತ್ತಿಲ್ಲ? ಪ್ರಜಾಪ್ರಭುತ್ವದಲ್ಲಿ ಯಾರಿಗೂ ಅನ್ಯಾಯವಾಗಬಾರದು. ಯಾವುದೇ ಧರ್ಮವನ್ನು ದೂಷಿಸುವುದು ಸರಿಯಲ್ಲ. ಯಾರಿಗೂ ಅನ್ಯಾಯವಾಗಬಾರದು ಎಂದು ಸ್ವಾಮೀಜಿ

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!