ಮತ್ತೆ ಹೆಚ್ಚಾಯ್ತಾ ಕೋವಿಡ್ ?

ಮತ್ತೆ ಹೆಚ್ಚಾಯ್ತಾ ಕೋವಿಡ್ ?

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆಯಾ? ಎಂಬ ಅನುಮಾನ ಕಾಡಲಾರಂಭಿಸಿದೆ.
ಹೌದು, ಇದಕ್ಕೆ ಪುಷ್ಠಿ ನೀಡುವಂತೆ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 120 ಕೊರೊನಾ ವೈರಸ್‌ ಸೋಂಕಿತರು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,916 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ವರದಿ ನೀಡಿದೆ.
ದೇಶದ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೇರಿದೆ. ಒಂದು ದಿನದ ಅವಧಿಯಲ್ಲಿ ಕೇರಳದಲ್ಲಿ ವ್ಯಕ್ತಿಯೊಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಕೋವಿಡ್‌ನಿಂದ ಸತ್ತವರ ಸಂಖ್ಯೆ 5,30,761 ಕ್ಕೆ ಹೆಚ್ಚಾಗಿದೆ.
ದೇಶದ ಒಟ್ಟು ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.01ರಷ್ಟಿದೆ. ರಾಷ್ಟ್ರೀಯ ಕೋವಿಡ್-19 ಚೇತರಿಕೆ ದರವು ಶೇಕಡಾ 98.81 ರಷ್ಟು ಏರಿಕೆ ಕಂಡಿದೆ.  ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,52,360 ಕ್ಕೆ ಏರಿಕೆಯಾಗಿದೆ.
ಕೋವಿಡ್ ಸೋಂಕು ನಿಯಂತ್ರಿಸಲು ರಾಷ್ಟ್ರವ್ಯಾಪಿ ಕೋವಿಡ್–19 ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.63 ಕೋಟಿ ಡೋಸ್‌ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

error: Content is protected !!