ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ಧರಣಿ ಹಿಂಪಡಿಕೆ
ದಾವಣಗೆರೆ: ಡಾ|| ಬಿ.ಆರ್. ಅಂಬೇಡ್ಕರ್ ರಾಜ್ಯ ಸರಕಾರಿ ಆಸ್ಪತ್ರೆಗಳ ಗುತ್ತಿಗೆ ನೌಕರರ ಹಾಗೂ ಇತರೆ ದಿನಗೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಹೊರಗುತ್ತಿಗೆ ದಿನಗೂಲಿ ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಅಧೀಕ್ಷಕರು ಸಹಮತಿಸಿದ ಹಿನ್ನೆಲೆಯಲ್ಲಿ ನೌಕರರು ಧರಣಿಯನ್ನು ಹಿಂಪಡೆದಿದ್ದಾರೆ ಎಂದು ಸಂಘದ ರಾಜ್ಯಾಧ್ಯಕ್ಷ ಡಿ. ಹನುಮಂತಪ್ಪ ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆಯ ದಿನಗೂಲಿ ನೌಕರರು ಕಳೆದ ೨೦ ವರ್ಷಗಳಿಂದ ಹೊರಗುತ್ತಿಗೆ ಕಾರ್ಮಿಕರಾಗಿ ಶೌಚಾಲಯ ಸ್ವಚ್ಛತೆ, ಆಸ್ಪತ್ರೆ ಸ್ವಚ್ಛತೆಯನ್ನು ಮಾಡುತ್ತಾ ಬಂದಿದ್ದಾರೆ, ಕೋವಿಡ್ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಸರ್ಕಾರದ ಸೂಚನೆ ಮೇರಗೆ ಮನೆಗಳಿಗೆ ತೆರಳದೆ ಆಸ್ಪತ್ರೆಯಲ್ಲಿಯೇ ತಂಗಿ ಸೇವೆಸಲ್ಲಿಸಿದ್ದಾರೆ. ಅವರಿಗೆ ಕೋವಿಡ್ ಆಲೋಯೆನ್ಸ್ ನೀಡುವಂತೆ ಹಾಗೂ ನೇರಪಾವತಿಗೆ ಆಗ್ರಹಿಸಿ ಧರಣಿ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಜಿಲ್ಲಾಧಿಕಾರಿಗಳವರು ಸಹಕರಿಸುವುದಾಗಿ ಅಭಯ ನೀಡಿರುವ ಹಿನ್ನೆಲೆಯಲ್ಲಿ ಧರಣಿ ಹಿಂಪಡೆದಿರುವುದಾಗಿ ಅವರು ತಿಳಿಸಿದ್ದಾರೆ.