41ನೇ ವಾರ್ಡ್ನಲ್ಲಿ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆ

ಮಹಿಳಾ ಕಾಂಗ್ರೆಸ್

41ನೇ ವಾರ್ಡ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಬ್ಲಾಕ್ ಅಧ್ಯಕ್ಷರಾದ ರಾಜೇಶ್ವರಿ ನೇತೃತ್ವದಲ್ಲಿ ನಡೆಯಿತು.

ವಾರ್ಡ್ ಮಹಿಳಾ ಘಟಕದ ಅಧ್ಯಕ್ಷರಾದ ರೇಖಾ , ನಗರ ಪಾಲಿಕೆ ಮಾಜಿ ಸದಸ್ಯರಾದ ಶೈಲಾ ನಾಗರಾಜ್ ಹಾಗೂ
ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿ ಪಕ್ಷ ಸಂಘಟನೆಯ ಕುರಿತು ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಮನೆಮನೆಗೆ ತಲುಪಿಸುವ ಕುರಿತು ಚರ್ಚಿಸಿದರು.

ಇತ್ತೀಚೆಗಷ್ಟೇ ಡಾ. ಪ್ರಭಾ ಮಲ್ಲಿಕಾರ್ಜುನ್ ವಾರ್ಡ್ಗಳಲ್ಲಿಗೆ ಸಭೆ ನಡೆಸುವ ಮೂಲಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ, ಸಮಿತಿ ರಚನೆ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ನಡೆಸಲು ಸಲಹೆ ನೀಡಿದರು.

Leave a Reply

Your email address will not be published. Required fields are marked *

error: Content is protected !!