ವೀರಶೈವ ಮಹಾಸಭಾ ಮಹಿಳಾ ಘಟಕದಿಂದ ಮಹಿಳಾ ದಿನಾಚರಣೆ

ವೀರಶೈವ ಮಹಾಸಭಾ ಮಹಿಳಾ ಘಟಕದಿಂದ ಮಹಿಳಾ ದಿನಾಚರಣೆ

ದಾವಣಗೆರೆ: ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ದಾವಣಗೆರೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಅಂತರಾಷ್ಟೀಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ರಾಷ್ಟೀಯ ಅಧ್ಯಕ್ಷರಾದ ಡಾ|| ಶಾಮನೂರು ಶಿವಶಂಕರಪ್ಪನವರು ಮಹಿಳೆಯರನ್ನು ಒಗ್ಗೂಡಿಸಿ ಅವರ ಸುರಕ್ಷತೆ ಹಾಗೂ ಆರ್ಥಿಕ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಈ ದಿನಾಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪುರುಷ ಪ್ರಧಾನ ಸಮಾಜ ಆದರೂ ಮೊದಲಿನಿಂದಲೂ ಮಹಿಳೆಯರು ಸಾಕಷ್ಟು ಸಾಧನೆ ಮಾಡಿದ್ದಾರೆ. ನಮ್ಮ ಪುರಾಣಗಳಲ್ಲಿ ಮಹಿಳೆಯರು ಸಾಕಷ್ಟು ಮಹತ್ವ ಪಡೆದಿದ್ದಾರೆ. ಸ್ವಾತಂತ್ರ್ಯ. ಹೋರಾಟದಲ್ಲಿ ಕಿತ್ತೂರು ಚೆನ್ನಮ್ಮ, ಕೆಳದಿ ಚನ್ನಮ್ಮ  ಕಹಳೆ ಊದಿದರು. ಅನೇಕ ಮಹಿಳೆಯರು ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ ಎಂದರು.

ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ಮಾತನಾಡಿ ಮಹಿಳೆಯರಿಗೆ ಶುಭಕೋರಿದರು.

ಇದೇ ವೇಳೆ ಅಂತರಾಷ್ಟೀಯ ಮಹಿಳಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಡಾ|| ಲತಾ ಅವರು ಉಪನ್ಯಾಸ ನೀಡಿದರು.

ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಶುಭ ಐನಳ್ಳಿ, ಪುಷ್ಪವಾಲಿ, ನಿರ್ಮಲಾ ಸುಭಾಷ್, ಡಾ|| ವಿಜಯಲಕ್ಷ್ಮೀ, ಶ್ರೀಮತಿ ಗೀತಾ ಚಂದ್ರಶೇಖರ್, ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ಯುವ ಘಟಕದ ಬಿ.ಜೆ.ರಮೇಶ್ ಮತ್ತಿತರರಿದ್ದರು.

Leave a Reply

Your email address will not be published. Required fields are marked *

error: Content is protected !!