ದಾವಣಗೆರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ದಾವಣಗೆರೆ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆಕ್ಷನ್ ಇನ್ಷಿಯೇಟಿವ್ ಫಾರ್ ಡೆವಲಪ್‌ಮೆಂಟ್ (ಎಐಡಿ), ಜಿಲ್ಲಾ ವಕೀಲರ ಸಂಘ, ಅರಣ್ಯ ಇಲಾಖೆ ದಾವಣಗೆರೆ ಇವರ ಸಂಯುಕ್ತಾಶ್ರಯಲ್ಲಿ ಜೂ.05 ರಂದು ಬೆಳಿಗ್ಗೆ 10 ಗಂಟೆಗೆ ಬಾಬು ಜಗಜೀವನರಾಮ ನಗರದ ಪಾರ್ಕ್ ಆವರಣ, ಬೂದಿಹಾಳು ರಸ್ತೆ, ದಾವಣಗೆರೆ ಇಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ 500 ಸಸಿಗಳನ್ನು ನೆಡುವ ಅಭಿಯಾನ ಕಾರ್ಯಕ್ರಮದ ಚಾಲನೆಯನ್ನು ಹಮ್ಮಿಕೊಳ್ಳಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ.ಎನ್ ಹೆಗಡೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಎಐಡಿ ಸಂಸ್ಥೆಯ ಕಾರ್ಯದರ್ಶಿ ಬಾಬಣ್ಣ.ಡಿ.ಎಸ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸಯ ಕಾರ್ಯದರ್ಶಿ ಪ್ರವೀಣ ನಾಯಕ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಡಿ.ಪಿ ಬಸವರಾಜು ಪಾಲ್ಗೋಳುವರು. ಹಿರಿಯ ವಕೀಲರಾದ ಎಲ್.ಹೆಚ್ ಅರುಣ್ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!