ವಿಶ್ವ ಪರಿಸರ ದಿನಾಚರಣೆ! ನೂತನ ಕೇಂದ್ರ ಪರಿಸರ ಪ್ರಯೋಗಾಲಯ-2 ಕಟ್ಟಡ ಲೋಕಾರ್ಪಣೆ
ದಾವಣಗೆರೆ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ-2022 ಕಾರ್ಯಕ್ರಮದ ಉದ್ಘಾಟನೆ ಹಾಗೂ ನೂತನ ಕೇಂದ್ರ ಪರಿಸರ ಪ್ರಯೋಗಾಲಯ-2 ಕಟ್ಟಡದ ಲೋಕಾರ್ಪಣೆ ಸಮಾರಂಭವನ್ನು ಜೂನ್.05ರ ಭಾನುವಾರದಂದು ಬೆಳಿಗ್ಗೆ 11.30ಕ್ಕೆ ನಗರದ ದೇವರಾಜ್ ಅರಸ್ ಬಡಾವಣೆ ಸಿ ಬ್ಲಾಕ್‌ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯ ಆವರಣದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವರ್ಚುವಲ್ ಹೋಸ್ಟಿಂಗ್ ಮೂಲಕ ಉದ್ಘಾಟಿಸುವರು. ಪರಿಸರ, ಜೀವಿಶಾಸ್ತ ಹಾಗೂ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ(ಭೈರತಿ), ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಡಾ.ಶಾಂತ್ ಎ. ತಿಮ್ಮಯ್ಯ ಘನ ಉಪಸ್ಥಿತರಿರುವರು.
ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ, ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಚನ್ನಗಿರಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷರು ಮತ್ತು ನಿರ್ದೇಶಕರಾದ ಕೆ.ಮಾಡಾಳ್ ವಿರೂಪಾಕ್ಷಪ್ಪ, ಜಗಳೂರು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ, ಮಾಯಕೊಂಡ ಶಾಸಕ ಹಾಗೂ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಎನ್. ಲಿಂಗಣ್ಣ, ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ. ನಾರಾಯಣಸ್ವಾಮಿ, ದಾವಣಗೆರೆ ಉತ್ತದ ವಿಧಾನ ಸಭಾ ಶಾಸಕರಾದ ಎಸ್.ಎ. ರವೀಂದ್ರನಾಥ್, ಹರಿಹರ ಶಾಸಕ ಎಸ್.ರಾಮಪ್ಪ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜು0ಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ.ತೇಜಸ್ವಿನಿ ಗೌಡ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಚಿದಾನಂದ.ಎ0.ಗೌಡ, ಆರ್.ಶಂಕರ್, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ಆರ್.ಜಯಮ್ಮ ಗೋಪಿನಾಯ್ಕ್, ದೂಢಾ ಅಧ್ಯಕ್ಷರಾದ ಕೆ.ಎಂ ಸುರೇಶ್, ಮಹಾನಗರ ಪಾಲಿಕೆಯ ಸದಸ್ಯ ವಿನಾಯಕ ಪೈಲ್ವಾನ್ ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಬೆಂಗಳೂರಿನ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿಜಯ್ ಮೋಹನ್ ರಾಜ್ ವಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು ರವರು ಭಾಗವಹಿಸುವರು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಚಿತ್ರದುರ್ಗದ ಕ.ರಾ.ಮಾ.ನಿ.ಮಂ ವಲಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಬಿ.ಎಸ್ ಮುರಳಿಧರ, ಜಿಲ್ಲಾ ಕ.ರಾ.ಮಾ.ನಿ.ಮಂ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಈ. ಪ್ರಕಾಶ್ ಇವರುಗಳು ಪಾಲ್ಗೊಳ್ಳುವರು.
gಚಿಡಿuಜಚಿvoiಛಿe21@gmಚಿiಟ.ಛಿom 9740365719