ಜೂ.16 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ
ದಾವಣಗೆರೆ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಾರ್ಮಿಕ ಯೋಜನಾ ಸಂಸ್ಥೆ, ದಾವಣಗೆರೆ ಹಾಗೂ ಸ್ವಯಂ ಸೇವಾ ಸಂಸ್ಥೆಯವರ ಸಂಯುಕ್ತಾಶ್ರಯದಲ್ಲಿ ಜೂ.16 ರಂದು ಬೆಳಿಗ್ಗೆ 11 ಗಂಟೆಗೆ ಮಿಲ್ಲತ್ ಮಹಾ ವಿದ್ಯಾಲಯ ಸಭಾಂಗಣ, ಭಾಷಾನಗರ, ದಾವಣಗೆರೆ ಇಲ್ಲಿ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗ 9 ಗಂಟೆಗೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್ ಹೆಗಡೆ ಚಾಲನೆ ನೀಡುವರು. ಕಾರ್ಯಕ್ರಮವನ್ನು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಉದ್ಘಾಟಿಸುವರು ದಾವಣಗೆರೆ ದಕ್ಷಿಣ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ, ಚನ್ನಗಿರಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಕೆ.ಮಾಡಾಳ್ ವಿರೂಪಾಕ್ಷಪ್ಪ, ಜಗಳೂರು ಕ್ಷೇತ್ರದ ಶಾಸಕ ಹಾಗೂ ಕನಾಟಕ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ಮಾಯಕೊಂಡ ಕ್ಷೇತ್ರದ ಶಾಸಕ ಹಾಗೂ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ , ಹಾಗೂ ಕರ್ನಾಟಕ ವಿಧಾನ ಪರಿಷತ್‍ನ ಸರ್ಕಾರಿ ಮುಖ್ಯ ಸಚೇತಕರು, ವೈ.ಎ.ನಾರಾಯಣ ಸ್ವಾಮಿ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ವಿಧಾನ ಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಎಸ್.ಎ ರವೀಂದ್ರನಾಥ್, ಎಸ್.ರಾಮಪ್ಪ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ತೇಜಸ್ವಿನಿಗೌಡ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಆರ್.ಶಂಕರ್, ಡಿ.ಎಸ್ ಅರುಣ್, ಕೆ.ಎಸ್ ನವೀನ್ ಹಾಗೂ ಮಹಾನಗರ ಪಾಲಿಕೆಯ ಮಹಾಪೌರ ಆರ್ ಜಯಮ್ಮ, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ.ಸುರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ ಚೆನ್ನಪ್ಪ ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.
garudavoice21@gmail.com 9740365719