ವಿಶ್ವ ಅಂಗಾಂಗ ದಾನ ದಿನಾಚರಣೆ: ಸಿಎಂ ಬಸವರಾಜ್ ಬೊಮ್ಮಾಯಿ ರಿಂದ ಅಂಗಾಂಗ ದಾನಕ್ಕೆ ಸಹಿ

ಉಡುಪಿ: ಅಂಗಾಂಗ ದಾನದಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿರುವುದರಿಂದ ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
ಇಂದು ವಿಶ್ವ ಅಂಗಾಂಗ ದಾನ ದಿನಾಚರಣೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದ್ದು, ಇದರಿಂದ ಸಾವಿರಾರು ಜನರು ಮರುಜೀವ ಪಡೆಯುತ್ತಿದ್ದಾರೆ. ಅಂಗಾಂಗ ದಾನ ಮಾಡುವುದರಿಂದ ಜೀವ ಉಳಿಸಬಹುದು ಎಂದು ತಿಳಿಸಿದರು.
ಅಂಗಾಂಗ ಕಸಿ ಯಶಸ್ವಿಯಾಗುತ್ತಿದ್ದು, ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಅಂಗಾಂಗ ದಾನಕ್ಕೆ ಸಹಿ ಹಾಕಬೇಕೆಂದು ಕರೆ ನೀಡಿದರು.
ಕಿಡ್ನಿ ,ಹಾರ್ಟ್, ಲಿವರ್ ಇನ್ನೊಬ್ಬರ ಉಪಯೋಗಕ್ಕೆ ಬರಲಿ. ನಿಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಯಾಕೆ ಮಾಡಬಾರದು ಎಂದು ಪ್ರಶ್ನಿಸಿದ ಅವರು, ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.