ಅತ್ತಿಗೆರೆಯಲ್ಲಿ ವಿಶ್ವ ಜಲ ದಿನ
ದಾವಣಗೆರೆ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ, ಜಿಲ್ಲಾ ವಕೀಲರ ಸಂಘ ಹಾಗೂ ಕೇಸರಿ ವಿದ್ಯಾ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ ಮಾ. 22 ರಂದು ಮಧ್ಯಾಹ್ನ 2.30 ಗಂಟೆಗೆ ತಾಲ್ಲೂಕಿನ ಅತ್ತಿಗೆರೆಯ ಮಹಾದೇವ ಕೇಸರಿ ಆಂಗ್ಲಮಾಧ್ಯಮ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್ ಕಾರ್ಯಕ್ರಮ ಉದ್ಘಾಟಿಸುವರು. ಗ್ರಾ.ಪಂ. ಅಧ್ಯಕ್ಷೆ ಯಶೋದಮ್ಮ ಚಂದ್ರಪ್ಪ ಅಧ್ಯಕ್ಷತೆ ವಹಿಸುವರು. ಹಿರಿಯ ವಕೀಲ ಎಲ್.ಹೆಚ್. ಅರುಣ್ಕುಮಾರ್ ವಿಶೇಷ ಉಪನ್ಯಾಸ ನೀಡುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಪಿ. ಬಸವರಾಜ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕಾರ್ಯದರ್ಶಿ ಎಂ. ಗುರುಸಿದ್ದಸ್ವಾಮಿ, ಕೇಸರಿ ವಿದ್ಯಾಸಂಸ್ಥೆ ಅಧ್ಯಕ್ಷ ಓಂಕಾರಪ್ಪ, ಮುಖ್ಯೋಪಾಧ್ಯಾಯ ಲೋಹಿತ್ಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.