ಯಕ್ಷಗಾನ ಅಕಾಡೆಮಿ : ಪುಸ್ತಕ ಬಹುಮಾನಕ್ಕೆ ಲೇಖಕಕರು, ಪ್ರಕಾಶಕರಿಂದ ಅರ್ಜಿ ಆಹ್ವಾನ

WhatsApp Image 2022-02-07 at 5.38.50 PM

ದಾವಣಗೆರೆ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ, ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2021 ರ ಜನವರಿ 01 ರಿಂದ ಡಿಸೆಂಬರ್ 31 ರ ಅವಧಿಯಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು. ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು. ಆಯ್ಕೆಯಾದ ಪುಸ್ತಕಕ್ಕೆ ರೂ.25,000 ಬಹುಮಾನ ನೀಡಲಾಗುವುದು.
ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560002, ಇವರಿಗೆ ಫೆಬ್ರವರಿ 23 ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ ದೂ:080-22113146 ಪಡೆಯಬಹುದು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!