ಯಶ್, ರಿಷಭ್ ಶೆಟ್ಟಿ ಪ್ರಧಾನಿ ಮೋದಿ ಭೇಟಿ

ಪ್ರಧಾನಿ ಮೋದಿ
ಬೆಂಗಳೂರು: ನಟರಾದ ಯಶ್, ರಿಷಭ್ ಶೆಟ್ಟಿ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ನಿರ್ಮಾಪಕ ವಿಜಯ್ ಕಿರಂಗದೂರು ಹಾಗೂ ಡಿಜಿಟಲ್ ಕ್ರಿಯೇಟರ್ ಶ್ರದ್ಧಾ ಜೈನ್ ಅವರುಗಳು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಏರೋ ಇಂಡಿಯಾ ಏರ್ ಶೊ ಉದ್ಘಾಟನೆಗೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಿದ್ರು. ಭಾನುವಾರ ರಾತ್ರಿ ರಾಜಭವನದಲ್ಲಿ ಮೋದಿ ಅವರು ತಂಗಿದ್ದ ವೇಳೆ ಪ್ರಧಾನಿ ಕಚೇರಿ ಅಧಿಕಾರಿಗಳು ಈ ಭೇಟಿಗೆ ವ್ಯವಸ್ಥೆ ಮಾಡಿದ್ದರು.
ಮೋದಿ ಜೊತೆಗಿನ ಔತಣಕೂಟದಲ್ಲಿ ಯಶ್, ರಿಷಭ್ ಶೆಟ್ಟಿ ಭಾಗಿಯಾಗಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ, ಔತಣಕೂಟದಲ್ಲಿ ಪಾಲ್ಗೊಂಡಿರುವ ಬಗ್ಗೆ ಇದುವರೆಗೆ ಖಚಿತತೆ ಇಲ್ಲ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಕರ್ನಾಟಕ ಚಿತ್ರರಂಗದ ಪ್ರಮುಖರನ್ನು ಭೇಟಿಯಾದರು. ಸಂಸ್ಕೃತಿ, ನವ ಭಾರತ ಮತ್ತು ಕರ್ನಾಟಕದ ಪ್ರಗತಿಗೆ ಅವರು ನೀಡಬಹುದಾದ ಕೊಡುಗೆಗಳ ಕುರಿತು ಚರ್ಚಿಸಿದರು ಎಂದು ಹೇಳಿದೆ.