ಯಶವಂತಪುರ: ಎಸ್.ಟಿ.ಸೋಮಶೇಖರ್ ಪರ ಜೆ.ಪಿ.ನಡ್ಡಾ ಪ್ರಚಾರ

ಯಶವಂತಪುರ: ಎಸ್.ಟಿ.ಸೋಮಶೇಖರ್ ಪರ ಜೆ.ಪಿ.ನಡ್ಡಾ ಪ್ರಚಾರ

ಬೆಂಗಳೂರು: ರಾಜಕೀಯ ಲಾಭಕ್ಕಾಗಿ ಸಿದ್ಧಾಂತವನ್ನು ಅಡವಿಡುವ ಜೆಡಿಎಸ್ ನಾಯಕರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಮೋದಿ ನೇತೃತ್ವದ ಸಶಕ್ತ ಹಾಗೂ ಡಬಲ್ ಇಂಜಿನ್ ಸರ್ಕಾರಕ್ಕೆ ಬೆಂಬಲ ನೀಡುವ ಮೂಲಕ ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.
ಕೆಂಗೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಪರ ಮತಪ್ರಚಾರದಲ್ಲಿ ತೊಡಗಿದ್ದ ವೇಳೆ ಮಾತನಾಡಿದರು. ರಾಜಕೀಯ ಲಾಭಕ್ಕಾಗಿ ಯಾರ ಜೊತೆ ಬೇಕಾದರೂ ಕೈಜೋಡಿಸುತ್ತಾರೆ. ಇಂತಹವರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವೇ ಎಂದು ಟೀಕಿಸಿದರು.

2014ರ ನಂತರ ದೇಶವು ಹಲವು ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಿದೆ. ಆಟೋಮೊಬೈಲ್, ಸಾಫ್ಟ್‌ವೇರ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸ್ವಾವಲಂಬನೆ ಸಾಧಿಸಿದೆ. ಮತ್ತೆ ವಿರೋಧ ಪಕ್ಷಗಳಿಗೆ ಅಧಿಕಾರ ವರ್ಗಾವಣೆ ಆದರೆ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವುದು ನಿಶ್ಚಿತ ಎಂದರು.
ಕಾಂಗ್ರೆಸ್ ನ ಹಲವು ನಾಯಕರು ಬೇಲ್ ಮೇಲೆ ಇದ್ದಾರೆ. ಉಳಿದವರು ಜೈಲಿನಲ್ಲಿದ್ದಾರೆ. ಇಂತಹ ನಾಯಕರು ಬಿಜೆಪಿ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅರ್ಕಾವತಿ ರಿಡೂ ಪ್ರಕರಣ, ಪೊಲೀಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಾರು ಕೋಟಿ ಭ್ರಷ್ಟಾಚಾರವೆಸಗಿದ್ದಾರೆ. ಎಸ್.ಟಿ.ಸೋಮಶೇಖರ್ ಅವರನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಕನಸನ್ನು ಭಂಗಗೊಳಿಸಬೇಕು ಎಂದು ಕರೆಕೊಟ್ಟರು.

Leave a Reply

Your email address will not be published. Required fields are marked *

error: Content is protected !!