ಯಶವಂತಪುರ: ಸಚಿವ ಎಸ್.ಟಿ.ಸೋಮಶೇಖರ್ ನಾಮಪತ್ರ

ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಆರಂಭವಾಗಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ನಾಮಪತ್ರ ಸಲ್ಲಿಸಿದರು.
ಪತ್ನಿ ರಾಧಾ ಸೋಮಶೇಖರ್, ಪುತ್ರ ನಿಶಾಂತ್ ಸೋಮಶೇಖರ್ ಜೊತೆ ಹೇರೋಹಳ್ಳಿ ಬಿಬಿಎಂಪಿ ಕಚೇರಿಯ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದರು. ಸೂಚಕರಾದ ಅನಿಲ್ ಚೆಳಗೆರೆ ಮತ್ತು ರಂಗರಾಜ್ ಕೂಡಾ ಎಸ್.ಟಿ.ಸೋಮಶೇಖರ್ ಜೊತೆಗಿದ್ದರು.