ಬಿಜೆಪಿ ಮುಳುಗಿಸಿದ ಕೀರ್ತಿ ಯಡಿಯೂರಪ್ಪರದ್ದು ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಸವದಿ
ಬೆಳಗಾವಿ : ಬಿಜೆಪಿ ಮುಳುಗಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಹೇಳಿದರು.
ಪಟ್ಟಣದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಹಾಗೂ ನನ್ನ ಬಗ್ಗೆ ಮಾತನಾಡುವ ನೈತಿಕತೆ ಯಡಿಯೂರಪ್ಪ ಅವರಿಗೆ ಇಲ್ಲ ಎಂದು ಕಿಡಿಕಾರಿದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿಯೂ ಪಕ್ಷವನ್ನು ಬಿಟ್ಟು ಹೋದವರು. ನಮ್ಮ ಬಗ್ಗೆ ಟೀಕಿಸುವ ಮುನ್ನ ತಮ್ಮ ಹಿಂದಿನ ವಿಚಾರಗಳನ್ನು ಸ್ವಲ್ಪ ವಿಚಾರ ಮಾಡಿ ಮಾತನಾಡಬೇಕು ಎಂದರು.
ಯಡಿಯೂರಪ್ಪ ಬಗ್ಗೆ ಹೆಚ್ಚು ಮಾತನಾಡಿ ಪ್ರಯೋಜನವಿಲ್ಲ. ರಾಜ್ಯದ ವಿವಿಧೆಡೆ ಪ್ರಚಾರ ಮಾಡಬೇಕು, ನನ್ನ ನೇತೃತ್ವದಲ್ಲಿ 15 ರಿಂದ 20 ಸ್ಥಾನ ಗೆಲ್ಲಿಸಬೇಕು ಎಂದು ಕಾಂಗ್ರೆಸ್ ನಾಯಕರು ನನಗೆ ಜವಾಬ್ದಾರಿ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪೂರಕ ವಾತಾವರಣವಿದೆ. 125ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದರು.