ಕಟೀಲ್ ರವರ ಚಿಕಿತ್ಸೆಯ ವೆಚ್ಚವನ್ನು ಯುವ ಕಾಂಗ್ರೆಸ್ ಘಟಕ ಭರಿಸಲಿದೆ.! ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ: ನಳಿನ್ ಕುಮಾರ್ ಕಟೀಲ್ ರವರಿಗೆ ಮಾನಸಿಕ ಅಸ್ವಸ್ಥೆಯ ರೋಗವಿದೆ ಈ ರೋಗಕ್ಕೆ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ಅನಿಸುತ್ತಿದೆ. ಚಿಕಿತ್ಸೆಗೆ ತಗಲುವ ಎಲ್ಲಾ ವೆಚ್ಚವನ್ನು ಭರಿಸಲು ಯುವ ಕಾಂಗ್ರೆಸ್ ಘಟಕ ಸಿದ್ಧವಿದೆ ಆದಷ್ಟು ಬೇಗ ಚಿಕಿತ್ಸೆ ಪಡೆಕೊಳ್ಳಿ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಸಲಹೆ ನೀಡಿದ್ದಾರೆ.

ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು ಕಟೀಲ್ ರವರು ನಮ್ಮ ನಾಯಕರಾದ ರಾಹುಲ್ ಗಾಂಧಿ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.ಕೇಂದ್ರದಲ್ಲಿ ಇವರದ್ದೇ ಸರ್ಕಾರವಿದೆ ಇವರ ಕೈಯಲ್ಲಿ ಎನ್.ಸಿ.ಬಿ ಇದೆ ತನಿಖೆ ಯಾಕೆ ಮಾಡುತ್ತಿಲ್ಲ ಎಲ್ಲಾ ಮುಖ್ಯ ಸ್ವತಂತ್ರ ತನಿಖಾ ಸಂಸ್ಥೆಗಳು ನಿಮ್ಮ ಜೊತೆಯಲ್ಲಿವೆ ತನಿಖೆ ಮಾಡಿಸಿ ಎಂದು ಹೇಳಿದರು.

ಸುಮ್ಮನೆ ಇಲ್ಲ ಸಲ್ಲದ ಸುಳ್ಳುಗಳನ್ನು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುವುದನ್ನ ಬಿಡಿ ಬನ್ನಿ ಜನರ ಸಮಸ್ಯೆಗಳ ಬಗ್ಗೆ ಮಾತನಾಡೋಣ,ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳದ ಬಗ್ಗೆ,ರೈತರ ಸಮಸ್ಯೆಗಳ ಬಗ್ಗೆ,ಯುವಕರ ನಿರುದ್ಯೋಗಗಳ ಬಗ್ಗೆ,ಜನಸಾಮಾನ್ಯರ ಸಂಕಷ್ಟಗಳ ಬಗ್ಗೆ ಚರ್ಚೆ ಮಾಡೋಣ ಅದು ಬಿಟ್ಟು ಕೈಲಾಗದೆ ಇರೋರ ಥರ ಸುಳ್ಳು ಆರೋಪ ಮಾಡಿ ವಾಸ್ತವಿಕತೆಯನ್ನ ಮರೆಮಾಚಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀವು ರಾಜ್ಯಾಧ್ಯಕ್ಷರಾಗಿ, ಸಂಸದರಾಗಿ, ಜವಾಬ್ದಾರಿಯುತ ಸ್ಥಾನದಲ್ಲಿದ್ದೀರಿ ನಮ್ಮ ನಾಯಕರ ಬಗ್ಗೆ ಮಾತನಾಡುವಾಗ ಎಚ್ಚರದಿಂದ ಮಾತನಾಡಿ ಇಲ್ಲವಾದರೆ ಮುಂದೆ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

*ಸೈಯದ್ ಖಾಲಿದ್ ಅಹ್ಮದ್*
*ರಾಜ್ಯ ಪ್ರಧಾನ ಕಾರ್ಯದರ್ಶಿ*
*ಕರ್ನಾಟಕ ಯುವ ಕಾಂಗ್ರೆಸ್ ಸಮಿತಿ*

Leave a Reply

Your email address will not be published. Required fields are marked *

error: Content is protected !!