Youth Festival: ಜನವರಿ 5 ಮತ್ತು 6 ರಂದು ರಾಜ್ಯ ಮಟ್ಟದ ಯುವಜನೋತ್ಸವ, ಮುಖ್ಯಮಂತ್ರಿಗಳಿಂದ ಎಂಬಿಎ ಮೈದಾನದಲ್ಲಿ ಜ.5 ರಂದು ಉದ್ಘಾಟನೆ

IMG-20250104-WA0016
ದಾವಣಗೆರೆ: (Youth Festival) ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಬಾಪೂಜಿ ಎಂಬಿಎ ಮೈದಾನದಲ್ಲಿ ಜನವರಿ 5 ಮತ್ತು 6 ರಂದು ರಾಜ್ಯ ಮಟ್ಟದ ಯುವಜನೋತ್ಸವದ ವಿವಿಧ ಸ್ಪರ್ಧೆಗಳು ನಡೆಯಲಿದ್ದು ಜನವರಿ 5 ರಂದು ಬೆಳಗ್ಗೆ 10.30 ಕ್ಕೆ ಮುಖ್ಯಮಂತ್ರಿಗಳಾದ ಸನ್ನಾನ್ಯ ಸಿದ್ದರಾಮಯ್ಯನವರು ಉದ್ಘಾಟಿಸುವರು.
ಉಪಮುಖ್ಯಂತ್ರಿಗಳಾದ ಡಿ.ಕೆ.ಶಿವಕುಮಾರ್, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಉಪಸ್ಥಿತರಿರುವರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್,  ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಡಿ.ಎಸ್ ಅರುಣ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಅಸಗೋಡು ಜಯಸಿಂಹ, ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲನ್ ಆದಿತ್ಯ ಬಿಸ್ವಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್, ಪೊಲೀಸ್ ಮಹಾನಿರೀಕ್ಷಕರಾದ ಬಿ.ರಮೇಶ್, ರೇಷ್ಮೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಹಾಗೂ ಕ್ರೀಡಾ ಪ್ರಾಧಿಕಾರ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ಮಹಾ ನಿರ್ದೇಶಕರಾದ ಚೇತನ್.ಆರ್ ಉಪಸ್ಥಿತರಿರುವರು.
ವಿವಿಧ ಸ್ಪರ್ಧೆಗಳಿಗೆ ಚಾಲನೆ: ವೇದಿಕೆ-1ರಲ್ಲಿ ನಗರದ ಬಿ.ಐ.ಇ.ಟಿ ಕಾಲೇಜಿನ ಎಸ್.ಎಸ್.ಎಂ ಸಾಂಸ್ಕøತಿಕ ಸಭಾಂಗಣದಲ್ಲಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಜಾನಪದ ನೃತ್ಯಕ್ಕೆ ಚಾಲನೆ ನೀಡುವರು.
ವೇದಿಕೆ-2ರ ಬಾಪೂಜಿ ಎಂ.ಬಿ.ಎ ಕಾಲೇಜು ಸಭಾಂಗಣದಲ್ಲಿ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರು ಜಾನಪದ ಗೀತೆಗೆ ಚಾಲನೆ ನೀಡುವರು.
ವೇದಿಕೆ-3ರ ಎಸ್ ಎಸ್ ನ್ಯಾಷನಲ್ ಪಬ್ಲಿಕ್ ಶಾಲೆ ಎಂ.ಬಿ.ಎ ಕಾಲೇಜು ಮೈದಾನದಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಜಗಳೂರು ಶಾಸಕರಾದ ಬಿ.ದೇವೇಂದ್ರಪ್ಪ ಚಾಲನೆ ನೀಡುವರು.
ವೇದಿಕೆ-4ರಲ್ಲಿ ಬಾಪೂಜಿ ಎಂ.ಬಿ.ಎ ಕಾಲೇಜು ಕೊಠಡಿ ಸಂಖ್ಯೆ-1ರಲ್ಲಿ ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕವನ ರಚನೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ವೇದಿಕೆ-5ರಲ್ಲಿ ಬಾಪೂಜಿ ಎಂ.ಬಿ.ಎ ಕಾಲೇಜು ಕೊಠಡಿ ಸಂಖ್ಯೆ-2ರಲ್ಲಿ ಮಾಯಕೊಂಡ ಕ್ಷೇತ್ರದ ಶಾಸಕರಾದ ಕೆ.ಎಸ್ ಬಸವಂತಪ್ಪ ಕಥೆ ಬರೆಯುವ ಸ್ಪರ್ಧೆಗೆ ಚಾಲನೆ ನೀಡುವರು.
ವೇದಿಕೆ-6ರಲ್ಲಿ ದೃಶ್ಯಕಲಾ ಮಹಾವಿದ್ಯಾಲಯ, ಡೆಂಟಲ್ ಕಾಲೇಜು ರಸ್ತೆ, ತರಳಬಾಳು ಶಾಲೆ ಎದುರು ಇಲ್ಲಿ ಚನ್ನಗಿರಿ ಕ್ಷೇತ್ರದ ಶಾಸಕರಾದ ಬಸವರಾಜು.ವಿ.ಶಿವಗಂಗಾ ಚಿತ್ರಕಲೆ ಸ್ಪರ್ಧೆಗೆ ಚಾಲನೆ ನೀಡುವರು.
ವೇದಿಕೆ-7ರಲ್ಲಿ ದೃಶ್ಯಕಲಾ ಮಹಾವಿದ್ಯಾಲಯ, ಡೆಂಟಲ್ ಕಾಲೇಜು ರಸ್ತೆ, ತರಳಬಾಳು ಶಾಲೆ ಎದುರು ಇಲ್ಲಿ ಹರಿಹರ ಕ್ಷೇತ್ರದ ಶಾಸಕರಾದ ಬಿ.ಪಿ.ಹರೀಶ್ ಘೋಷಣೆ ಸ್ಪರ್ಧೆಗೆ ಚಾಲನೆ ನೀಡುವರು.
ರಾತ್ರಿ 8 ಗಂಟೆಗೆ ಎಂ.ಬಿ.ಎ ಕಾಲೇಜು ಮೈದಾನದ ಪ್ರಧಾನ ವೇದಿಕೆಯಲ್ಲಿ ಕದ್ರಿ ಮಣಿಕಾಂತ್ ಸಂಗೀತ ಸಂಜೆ(ಕಾನ್ಸರ್ಟ್), ಸವಾರಿ, ಸವಾರಿ 2, ಪೃಥ್ವಿ ಖ್ಯಾತಿಯ ಸಂಗೀತ ನಿರ್ದೇಶಕ, ಗಾಯಕ ಕದ್ರಿ ಮಣಿಕಾಂತ್ ಹಾಗೂ ಬಾಲಿವುಡ್ ಗಾಯಕಿ ಹಂಸಿಕಾ ಐಯ್ಯರ್ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಸಿಕೊಡುವರು.
ರಾಜ್ಯ ಮಟ್ಟದ ಯುವಜನೋತ್ಸವದ ಸಮಾರೋಪ ಸಮಾರಂಭ: ಜನವರಿ 6 ರಂದು ಸಂಜೆ 4 ಗಂಟೆಗೆ ನಗರದ ಬಿ.ಐ.ಇ.ಟಿ ಕಾಲೇಜಿನ ಎಸ್.ಎಸ್.ಎಂ ಸಾಂಸ್ಕøತಿಕ ಸಭಾಂಗಣದಲ್ಲಿ ರಾಜ್ಯಮಟ್ಟದ ಯುವಜನೋತ್ಸವ-2025ರ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಗೌರವ ಉಪಸ್ಥಿತರಾಗಿರುವರು. ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವ ಶಂಕರಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್,  ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಡಿ.ಎಸ್ ಅರುಣ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಅಸಗೋಡು ಜಯಸಿಂಹ, ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಭಾಗವಹಿಸುವರು.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲನ್ ಆದಿತ್ಯ ಬಿಸ್ವಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್, ಪೊಲೀಸ್ ಮಹಾನಿರೀಕ್ಷಕರಾದ ಬಿ.ರಮೇಶ್, ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಹಾಗೂ ಕ್ರೀಡಾ ಪ್ರಾಧಿಕಾರ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ಮಹಾ ನಿರ್ದೇಶಕರಾದ ಚೇತನ್.ಆರ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಉಪಸ್ಥಿತರಿರುವರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!