ಲೋಕಲ್ ಸುದ್ದಿ

ವೈ.ಎಸ್.ವಿ.ದತ್ತ ಮತ್ತೆ ಜೆಡಿಎಸ್ ನತ್ತ.!ಮುಖಂಡರ ಸಮ್ಮುಖದಲ್ಲಿ ಪಕ್ಷ ಸೇರಿದ ದತ್ತ

ವೈ.ಎಸ್.ವಿ.ದತ್ತ ಮತ್ತೆ ಜೆಡಿಎಸ್ ನತ್ತ.!ಮುಖಂಡರ ಸಮ್ಮುಖದಲ್ಲಿ ಪಕ್ಷ ಸೇರಿದ ದತ್ತ

ಕಡೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರ ಸನ್ಮುಖದಲ್ಲಿ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರು ಮತ್ತೆ ಜೆಡಿಎಸ್‌ಗೆ ಮರಳಿದರು.

ವೈ.ಎಸ್.ವಿ ದತ್ತ ಅವರು ಇತ್ತೀಚೆಗಷ್ಟೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ನಂತರ ಕೆ.ಎಸ್.ಆನಂದ್ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಅಸಮಾಧಾನಗೊಂಡು ಪಕ್ಷೇತರವಾಗಿ ಸ್ಪರ್ಧೆ ಮಾಡುವ ನಿರ್ಧಾರ ಮಾಡಿದ್ದರು. ಬುಧವಾರ ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು‌. ಅಗಲೇ ದತ್ತ ಅವರು ಮತ್ತೆ ಜೆಡಿಎಸ್ ಗೆ ವಾಪಸ್ಸಾಗುತ್ತಾರೆ. ಕಡೂರಿನಿಂದ ಜೆಡಿಎಸ್‌ನಿಂದಲೇ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಡಿತ್ತು. ಅದೀಗ ನಿಜವಾಗಿದೆ. ರೇವಣ್ಣ ಮತ್ತು ಪ್ರಜ್ವಲ್ ದತ್ತ ಅವರನ್ನು ಭೇಟಿ ಮಾಡುವುದರೊಂದಿಗೆ ಕಡೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಿ ದತ್ತ ಸ್ಪರ್ಧಿಸುವುದು ಖಚಿತವಾಗಿದೆ.

ಈ ಸಂದರ್ಭದಲ್ಲಿ ಮಾತಾಡಿದ ವೈ.ಎಸ್.ವಿ‌.ದತ್ತ, ನನ್ನ ಸ್ಪರ್ಧೆಯ ಬಗ್ಗೆ ನಿರ್ಧಾರ ಮಾಡುವವರು ಅಭಿಮಾನಿಗಳು‌ ಅವರ ನಿರ್ಧಾರವೇ ನನ್ನ ನಡೆ ಎಂದರು.

ಯಗಟಿಯ ಅವರ ಮನೆಯಲ್ಲಿ ಸೇರಿದ್ದ ಸಾವಿರಾರು ಜನರ ಉಪಸ್ಥಿತಿಯಲ್ಲಿ ಸಂಸದ ಪ್ರಜ್ವಲ್ ಮಾತನಾಡಿ, ಕಾಂಗ್ರೆಸ್ ಪಕ್ಷ ಕೇವಲ ದತ್ತಣ್ಣ ಅವರನ್ನು ನಂಬಿಸಿ ಮೋಸ ಮಾಡಿಲ್ಲ. ಅವರ ಅಭಿಮಾನಿಗಳಿಗೂ ಮೋಸ ಮಾಡಿದೆ ಎಂದರು.

ದೇವೇಗೌಡರ ಮಾರ್ಗದರ್ಶನದಂತೆ ದತ್ತ ಅವರನ್ನು ನಾವೆಲ್ಲರೂ ಸೇರಿ ಉಳಿಸಿಕೊಳ್ಳುತ್ತೇವೆ. ದತ್ತ ಅಭಿಮಾನಿಗಳು ನಂಬಿಕೆಯಿಟ್ಟು ಪಕ್ಷಕ್ಕೆ ಕಳಿಸಿಕೊಡಿ. ದತ್ತ ಅವರಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ’ ಎಂದರು.

ಮಾಜಿ ಸಚಿವ ಎಚ್.ಡಿ.ರೇವಣ್ಣ ಮಾತನಾಡಿ, ಕಡೂರು ಕ್ಷೇತ್ರದ ಮೇಲೆ ದೇವೇಗೌಡರಿಗೆ ಬಹಳ ಅಭಿಮಾನ. ಜೆಡಿಎಸ್ ಪಕ್ಷದ ಬೆಳವಣಿಗೆಯಲ್ಲಿ ದತ್ತ ಅವರ ಪಾಲೇನು ಎಂಬುದನ್ನು ನಾವೆಲ್ಲರೂ ಬಲ್ಲೆವು. ಸ್ವಂತ ದೇವೇಗೌಡರು ದತ್ತ ಅವರನ್ನು ಕೈಬಿಡಬಾರದು ಎಂದು ಹೇಳಿದ್ದಾರೆ. ಚುನಾವಣೆಗೆ ಸಮಯ ಹೆಚ್ಚಿಲ್ಲ. ಕಡೂರಿನಲ್ಲಿ ದತ್ತ ಅವರೇ ಜೆಡಿಎಸ್ ಅಭ್ಯರ್ಥಿಯಾಗಬೇಕೆಂದು ಎಲ್ಲರೂ ಒಮ್ಮತದ ನಿರ್ಣಯ ಮಾಡಿ, ಜನತೆ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!