ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಾಗಿ ಜಿ.ಎಸ್. ಶ್ಯಾಮ್ ಆಯ್ಕೆ
ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಜಿ.ಎಸ್.ಶ್ಯಾಮ್ ಅವರನ್ನು ಭಾಜಪ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಘಟಕ ಆದೇಶ ಹೊರಡಿಸಿದೆ.
ಜಿ.ಎಸ್.ಶ್ಯಾಮ್ ಅವರ ಕಾರ್ಯವೈಖರಿ, ಪಕ್ಷ ಸಂಘಟನೆ ಗುರುತಿಸಿ ಜವಾಬ್ದಾರಿ ನೀಡಲಾಗಿದೆ. ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು, ರಾಷ್ಟೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ, ಯುವ ಮೋರ್ಚ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ ಅವರು ಜಿ.ಎಸ್. ಶ್ಯಾಮ್ರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀಡಿರುವ ಮಹತ್ವದ ಹೊಣೆಯನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುವಂತೆ, ತಳಮಟ್ಟದಿಂದ ಪಕ್ಷ ಸಂಘಟಿಸುವಂತೆ ಹಾಗೂ ಮುಂಬರುವ ಎಲ್ಲ ಸವಾಲುಗಳನ್ನು ಸಮರ್ಥವಾಗಿ ಎದುರಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿರುವುದು ಸಂತಸ ತಂದಿದೆ. ಪಕ್ಷ ಸಂಘಟಿಸುವ ಜವಾಬ್ದಾರಿ ಹೊತ್ತು ಪಕ್ಷಕ್ಕಾಗಿ ದುಡಿಯುವೆ. ಜವಾಬ್ದಾರಿ ನೀಡಿದ ಪಕ್ಷದ ಎಲ್ಲ ನಾಯಕರಿಗೆ ಧನ್ಯವಾದ ತಿಳಿಸುವೆ..
ಜಿ.ಎಸ್.ಶ್ಯಾಮ್, ರಾಜ್ಯ ಉಪಾಧ್ಯಕ್ಷ, ಯುವ ಮೋರ್ಚಾ